Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:15 - ಕನ್ನಡ ಸತ್ಯವೇದವು C.L. Bible (BSI)

15 ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನ ಬಳಿಗೆ ಹೋಗುವದಕ್ಕೆ ಮೊರ್ದೆಕೈಯ ದತ್ತಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರತಿ ಬಂದಾಗ ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇವಿುಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:15
10 ತಿಳಿವುಗಳ ಹೋಲಿಕೆ  

ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ :


ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಪೂರಿಮ್ ಹಬ್ಬದ ಆಚರಣೆಗೆ ಸಂಬಂಧಪಟ್ಟ ಆ ಎರಡನೇ ಶಾಸನವನ್ನು ದೃಢಪಡಿಸುವುದಕ್ಕಾಗಿ ಮೊರ್ದೆಕೈಯ ಸಹಾಯವನ್ನು ಪಡೆದು ಅಧಿಕೃತ ಪತ್ರಗಳನ್ನು ಬರೆದಳು.


ನಾನೊಂದು ಕೋಟೆ, ನನ್ನ ಸ್ತನಗಳೇ ಬುರುಜುಗಳು ಆತನ ದೃಷ್ಟಿಯಲ್ಲಿ ನಾ ಹೊಂದುವೆನು ಶಾಂತಿಯನು ನಲ್ಲೆ :


ಆಕೆ ರಾಜನಿವಾಸಕ್ಕೆ ಸಾಯಂಕಾಲ ಹೋದವಳು ಮಾರನೆಯ ದಿನ ಬೆಳಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರಬೇಕಾಗಿತ್ತು. ಅರಸನು ಅವಳನ್ನು ಬಯಸಿ ಅವಳ ಹೆಸರು ಹಿಡಿದು ಕರೆಕಳುಹಿಸಿದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗುವಂತಿರಲಿಲ್ಲ.


ಅರಸ ಅಹಷ್ವೇರೋಷನ ಆಳ್ವಿಕೆಯ ಏಳನೇ ವರ್ಷದ ಹತ್ತನೆ ತಿಂಗಳಾದ ಪುಷ್ಯಮಾಸದಲ್ಲಿ (ತೇಬೆತ್ ಮಾಸದಲ್ಲಿ) ಆಕೆಯನ್ನು ಅರಸನ ಬಳಿಗೆ ಕರೆತರಲಾಯಿತು.


ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು