ಎಸ್ತೇರಳು 2:16 - ಕನ್ನಡ ಸತ್ಯವೇದವು C.L. Bible (BSI)16 ಅರಸ ಅಹಷ್ವೇರೋಷನ ಆಳ್ವಿಕೆಯ ಏಳನೇ ವರ್ಷದ ಹತ್ತನೆ ತಿಂಗಳಾದ ಪುಷ್ಯಮಾಸದಲ್ಲಿ (ತೇಬೆತ್ ಮಾಸದಲ್ಲಿ) ಆಕೆಯನ್ನು ಅರಸನ ಬಳಿಗೆ ಕರೆತರಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀಗೆ ಹತ್ತನೇ ತಿಂಗಳಾದ ಟೆಬೇತ್ ಮಾಸದಲ್ಲಿ ರಾಜನ ಏಳನೇ ವರ್ಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು. ಅಧ್ಯಾಯವನ್ನು ನೋಡಿ |