Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:17 - ಕನ್ನಡ ಸತ್ಯವೇದವು C.L. Bible (BSI)

17 ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:17
10 ತಿಳಿವುಗಳ ಹೋಲಿಕೆ  

ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.


ಪತ್ನಿಯ ರೂಪರಾಶಿಯನ್ನು ತನ್ನ ಪ್ರಜೆಗಳ ಹಾಗೂ ಪದಾಧಿಕಾರಿಗಳ ಮುಂದೆ ಪ್ರದರ್ಶಿಸುವ ಸಲುವಾಗಿ ರಾಜಮುಕುಟವನ್ನು ಧರಿಸಿದ ಆಕೆಯನ್ನು ರಾಜಸನ್ನಿಧಿಗೆ ಕರೆತರುವಂತೆ ಆಸ್ಥಾನ ಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳುಮಂದಿ ಕಂಚುಕಿಯರಿಗೆ ಅಪ್ಪಣೆಮಾಡಿದನು.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಅರಸ ಅಹಷ್ವೇರೋಷನ ಆಳ್ವಿಕೆಯ ಏಳನೇ ವರ್ಷದ ಹತ್ತನೆ ತಿಂಗಳಾದ ಪುಷ್ಯಮಾಸದಲ್ಲಿ (ತೇಬೆತ್ ಮಾಸದಲ್ಲಿ) ಆಕೆಯನ್ನು ಅರಸನ ಬಳಿಗೆ ಕರೆತರಲಾಯಿತು.


ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು