Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:18 - ಕನ್ನಡ ಸತ್ಯವೇದವು C.L. Bible (BSI)

18 ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತನ್ನ ಎಲ್ಲಾ ಸರದಾರರಿಗೂ ಪರಿವಾರದವರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ರಾಜರಿಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಸ್ತೇರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:18
14 ತಿಳಿವುಗಳ ಹೋಲಿಕೆ  

ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


“ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು.


ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು.


ಲೇವಿಯರು ಕೂಡ, “ಸುಮ್ಮನಿರಿ, ಇದು ದೇವರ ದಿವಸ; ದುಃಖಿಸಬೇಡಿ,” ಎಂದು ಹೇಳಿ ಜನರನ್ನು ಸಂತೈಸಿದರು.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ಆಗ ಲಾಬಾನನು ಊರಿನವರನ್ನೆಲ್ಲ ಕರೆಯಿಸಿ ಔತಣವನ್ನು ಏರ್ಪಡಿಸಿದನು.


ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು