ಎಸ್ತೇರಳು 2:23 - ಕನ್ನಡ ಸತ್ಯವೇದವು C.L. Bible (BSI)23 ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕೂಡಲೇ ವಿಚಾರಣೆ ನಡೆಸಿದಾಗ ಮೊರ್ದೆಕೈಯು ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಆ ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೇರಿಸಿದರು. ಈ ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲ ವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.