Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:4 - ಕನ್ನಡ ಸತ್ಯವೇದವು C.L. Bible (BSI)

4 ಯಾವ ಕನ್ಯೆಯು ಅರಸನಿಗೆ ಸುಪ್ರೀತಳಾಗಿ ಕಾಣುವಳೋ ಅವಳು ವಷ್ಟಿರಾಣಿಯ ಬದಲಾಗಿ ಪಟ್ಟದರಸಿಯಾಗಬೇಕು,” ಎಂದು ಹೇಳಿದರು. ಅವರ ಈ ಸಲಹೆ ಅರಸನಿಗೆ ಸೂಕ್ತವೆಂದು ತೋರಿಬರಲು ಅವನು ಅದೇ ಪ್ರಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಅರಸನಿಗೆ ಇಷ್ಟಳಾಗಿ ಕಾಣುವ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಎಂದು ಹೇಳಿದರು. ಅರಸನು ಈ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನಂತರ ರಾಜನಿಗೆ ಇಷ್ಟವಾದ ಕನ್ನಿಕೆಯನ್ನು ವಷ್ಟಿಯ ಬದಲಾಗಿ ರಾಣಿಯನ್ನಾಗಿ ಮಾಡಲಿ” ಎಂದು ಹೇಳಿದರು. ಅವರ ಸಲಹೆ ರಾಜನಿಗೆ ಸರಿಯೆನಿಸಿದ್ದರಿಂದ ಅವನು ಅದಕ್ಕೆ ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅರಸನ ದೃಷ್ಟಿಗೆ ಮೆಚ್ಚಿಗೆಯಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ,” ಎಂದನು. ಆ ಮಾತು ಅರಸನಿಗೆ ಸರಿಕಂಡುಬಂದದ್ದರಿಂದ ಅದೇ ಪ್ರಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:4
11 ತಿಳಿವುಗಳ ಹೋಲಿಕೆ  

ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.


“ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.


ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು.


ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.


ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.


ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು