Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:5 - ಕನ್ನಡ ಸತ್ಯವೇದವು C.L. Bible (BSI)

5 ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬೊಬ್ಬ ಯೆಹೂದಿ ಮನುಷ್ಯನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್‍ಕುಲದ ಕೀಷನ ಮರಿಮಗನೂ ಶಿಮ್ಗೀಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕೈ ಎಂಬ ಹೆಸರಿನ ಒಬ್ಬ ಯೊಹೂದ್ಯನಿದ್ದನು. ಇವನು ಯಾಯೀರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್‌ನಲ್ಲಿಯೇ ವಾಸಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:5
10 ತಿಳಿವುಗಳ ಹೋಲಿಕೆ  

ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.


ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.


ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ.


ಯಾವ ಕನ್ಯೆಯು ಅರಸನಿಗೆ ಸುಪ್ರೀತಳಾಗಿ ಕಾಣುವಳೋ ಅವಳು ವಷ್ಟಿರಾಣಿಯ ಬದಲಾಗಿ ಪಟ್ಟದರಸಿಯಾಗಬೇಕು,” ಎಂದು ಹೇಳಿದರು. ಅವರ ಈ ಸಲಹೆ ಅರಸನಿಗೆ ಸೂಕ್ತವೆಂದು ತೋರಿಬರಲು ಅವನು ಅದೇ ಪ್ರಕಾರ ಮಾಡಿದನು.


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು