ಎಸ್ತೇರಳು 2:7 - ಕನ್ನಡ ಸತ್ಯವೇದವು C.L. Bible (BSI)7 ತಂದೆತಾಯಿಗಳನ್ನು ಕಳೆದುಕೊಂಡು ಅನಾಥಳಾಗಿದ್ದ ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳನ್ನು (ಹದೆಸ್ಸಾ ಆಕೆಯ ಇನ್ನೊಂದು ಹೆಸರು) ತನ್ನ ಸ್ವಂತ ಮಗಳಂತೆ ಸ್ವೀಕರಿಸಿ ಸಾಕುತ್ತಿದ್ದನು. ಈಕೆ ಬಲು ರೂಪಸಿ ಹಾಗು ಲಾವಣ್ಯವತಿಯಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವನು ಎಸ್ತೇರಳೆಂಬ ಹೆಸರನ್ನು ಪಡೆದ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆ ತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಈಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದೆಸ್ಸಾ ಎಂಬ ಕನ್ನಿಕೆ ಇದ್ದಳು. ಈಕೆ ತಂದೆಯೂ ತಾಯಿಯೂ ಇಲ್ಲದ ತಬ್ಬಲಿಯಾಗಿದ್ದಳು. ಈಕೆಯ ತಂದೆತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕೈಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದೆಸ್ಸಾಳನ್ನು ಎಸ್ತೇರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿ |