ಎಸ್ತೇರಳು 3:13 - ಕನ್ನಡ ಸತ್ಯವೇದವು C.L. Bible (BSI)13 ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ - ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನ ಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಮುದುಕರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ, ಅವರ ಸೊತ್ತನ್ನು ಸೂರೆಮಾಡಿರಿ ಎಂದೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು. ಅಧ್ಯಾಯವನ್ನು ನೋಡಿ |