Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:2 - ಕನ್ನಡ ಸತ್ಯವೇದವು C.L. Bible (BSI)

2 ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜ್ಯದ ಎಲ್ಲಾ ಅಧಿಕಾರಿಗಳೂ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದವರೆಲ್ಲರೂ ಅವನಿಗೆ ಅಡ್ಡಬೀಳುತ್ತಿದ್ದರು. ಇದು ರಾಜಾಜ್ಞೆಯಾಗಿತ್ತು. ಆದರೆ ಮೊರ್ದೆಕೈ ಮಾತ್ರ ಅವನಿಗೆ ಅಡ್ಡಬೀಳಲೂ ಇಲ್ಲ ಗೌರವಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:2
15 ತಿಳಿವುಗಳ ಹೋಲಿಕೆ  

ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು.


ಮೊರ್ದೆಕೈಯು ತನಗೆ ಬಾಗಿ ನಮಸ್ಕಾರ ಮಾಡದಿದ್ದುದನ್ನು ಕಂಡು ಹಾಮಾನನು ಅವನ ಮೇಲೆ ಕಡುಗೋಪಗೊಂಡನು.


ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.


ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.


ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.


ಅಲ್ಲದೆ, “ಸರ್ವೇಶ್ವರನ ಪತಾಕೆಯನ್ನು ಎತ್ತಿಹಿಡಿಯಿರಿ. ಅಮಾಲೇಕ್ಯರ ಮೇಲೆ ಸರ್ವೇಶ್ವರನಿಗೆ ತಲತಲಾಂತರಕ್ಕೂ ಯುದ್ಧವಿರುವುದು,” ಎಂದು ಹೇಳಿದನು.


ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.


ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ಇದನ್ನು ಗಮನಿಸಿದ ಅರಮನೆಯ ದ್ವಾರಪಾಲಕರು, “ನೀನು ಅರಸನ ಆಜ್ಞೆಯನ್ನು ಮೀರುವುದೇಕೆ?” ಎಂದು ಮೊರ್ದೆಕೈಯನ್ನು ಕೇಳಿದರು.


ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು