Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:6 - ಕನ್ನಡ ಸತ್ಯವೇದವು C.L. Bible (BSI)

6 ಅವನು ಮೊರ್ದೆಕೈ ಒಬ್ಬನ ಮೇಲೆ ಕೈಮಾಡುವುದು ಸಾಲದೆಂದೆಣಿಸಿ ಇವನು ಯೆಹೂದ್ಯ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಇವನ ಬಂಧುಬಳಗದವರನ್ನೆಲ್ಲಾ, ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವದು ಸಾಲದೆಂದೆಣಿಸಿ ಇವನು ಯೆಹೂದಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಗಳನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೊರ್ದೆಕೈ ಯೆಹೂದ್ಯ ಜನಾಂಗಕ್ಕೆ ಸೇರಿದವನೆಂದು ಹಾಮಾನನಿಗೆ ತಿಳಿದುಬಂತು. ಕೇವಲ ಮೊರ್ದೆಕೈಯನ್ನು ಮಾತ್ರವೇ ಕೊಲ್ಲದೆ ಅಹಷ್ವೇರೋಷನ ಸಾಮ್ರಾಜ್ಯದಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೊಲ್ಲುವ ಉಪಾಯವನ್ನು ಹೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:6
6 ತಿಳಿವುಗಳ ಹೋಲಿಕೆ  

ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು