Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:8 - ಕನ್ನಡ ಸತ್ಯವೇದವು C.L. Bible (BSI)

8 ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:8
25 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ.


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು.


ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.


ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.


ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು