ಎಸ್ತೇರಳು 4:14 - ಕನ್ನಡ ಸತ್ಯವೇದವು C.L. Bible (BSI)14 ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಆಗ ಎಸ್ತೇರಳು ಮೊರ್ದೆಕೈಯನಿಗೆ, “ನೀನು ಹೋಗಿ ಶೂಷನ್ ನಗರದಲ್ಲಿ ಇರುವ ಯೆಹೂದ್ಯರನ್ನೆಲ್ಲಾ ಸಭೆಸೇರಿಸು. ಎಲ್ಲರೂ ಹಗಲಿರುಳೆನ್ನದೆ ಮೂರು ದಿನ ಅನ್ನಪಾನಗಳನ್ನು ತೊರೆದು ನನಗೋಸ್ಕರ ಉಪವಾಸವನ್ನು ಕೈಗೊಳ್ಳಲಿ. ನನ್ನ ದಾಸಿಯರೊಡನೆ ನಾನೂ ಉಪವಾಸ ಕೈಗೊಳ್ಳುವೆನು. ಅನಂತರ ಅರಸನ ಆಜ್ಞೆಯನ್ನು ಮೀರಿಯಾದರೂ ನಾನು ಆತನ ಬಳಿಗೆ ಹೋಗುವೆನು, ಸತ್ತರೂ ಸಾಯುವೆನು,” ಎಂದು ಹೇಳಿಕಳುಹಿಸಿದಳು.