ಎಸ್ತೇರಳು 4:15 - ಕನ್ನಡ ಸತ್ಯವೇದವು C.L. Bible (BSI)15-16 ಆಗ ಎಸ್ತೇರಳು ಮೊರ್ದೆಕೈಯನಿಗೆ, “ನೀನು ಹೋಗಿ ಶೂಷನ್ ನಗರದಲ್ಲಿ ಇರುವ ಯೆಹೂದ್ಯರನ್ನೆಲ್ಲಾ ಸಭೆಸೇರಿಸು. ಎಲ್ಲರೂ ಹಗಲಿರುಳೆನ್ನದೆ ಮೂರು ದಿನ ಅನ್ನಪಾನಗಳನ್ನು ತೊರೆದು ನನಗೋಸ್ಕರ ಉಪವಾಸವನ್ನು ಕೈಗೊಳ್ಳಲಿ. ನನ್ನ ದಾಸಿಯರೊಡನೆ ನಾನೂ ಉಪವಾಸ ಕೈಗೊಳ್ಳುವೆನು. ಅನಂತರ ಅರಸನ ಆಜ್ಞೆಯನ್ನು ಮೀರಿಯಾದರೂ ನಾನು ಆತನ ಬಳಿಗೆ ಹೋಗುವೆನು, ಸತ್ತರೂ ಸಾಯುವೆನು,” ಎಂದು ಹೇಳಿಕಳುಹಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15-16 ಆಗ ಎಸ್ತೇರಳು - ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿ ಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ ಎಂದು ಮೊರ್ದೆಕೈಗೆ ಮರಳಿ ಹೇಳಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15-16 ಆಗ ಎಸ್ತೇರಳು ಈ ಉತ್ತರವನ್ನು ಮೊರ್ದೆಕೈಗೆ ಕಳುಹಿಸಿದಳು: “ಮೊರ್ದೆಕೈ, ನೀನು ಹೋಗಿ ಶೂಷನ್‌ನಲ್ಲಿರುವ ಎಲ್ಲಾ ಯೆಹೂದ್ಯರನ್ನು ಒಟ್ಟಿಗೆ ಸೇರಿಸಿ ನನಗಾಗಿ ಉಪವಾಸವಿರಲು ಅವರಿಗೆ ಹೇಳು. ಮೂರು ದಿನ ಹಗಲುರಾತ್ರಿ ಊಟಮಾಡಲೂಬಾರದು ಕುಡಿಯಲೂಬಾರದು. ನಾನೂ ನಿಮ್ಮ ಹಾಗೆ ಉಪವಾಸದಿಂದಿರುವೆನು. ನನ್ನೊಂದಿಗೆ ನನ್ನ ಸೇವಕಿಯರೂ ಉಪವಾಸ ಮಾಡುವರು. ನಾವು ಉಪವಾಸ ಮಾಡಿದ ಬಳಿಕ ನಾನು ರಾಜನ ಬಳಿಗೆ ಹೋಗುವೆನು. ಆತನು ಕರೆಯದೆ ನಾನು ಆತನ ಬಳಿಗೆ ಹೋಗುವುದು ನ್ಯಾಯಬಾಹಿರ. ಆದರೂ ನಾನು ಹೋಗುವೆನು, ನಾನು ಸಾಯಬೇಕಾದರೆ ಸಾಯುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಎಸ್ತೇರಳು ಮತ್ತೆ ಮೊರ್ದೆಕೈಗೆ, ಅಧ್ಯಾಯವನ್ನು ನೋಡಿ |