Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಎಸ್ತೇರಳು ತನ್ನ ಸೇವೆಗಾಗಿ ನೇಮಿಸಲಾಗಿದ್ದ ರಾಜಕಂಚುಕಿಗಳಲ್ಲಿ ಒಬ್ಬನಾದ ಹತಾಕನನ್ನು ಕರೆದು, ಮೊರ್ದೆಕೈ ಬಳಿಗೆ ಕಳುಹಿಸಿ, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ಈ ವರ್ತನೆಗೆ ಕಾರಣವಾದರೂ ಯಾವುದೆಂದು ವಿಚಾರಿಸಿಕೊಂಡು ಬರುವಂತೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:5
10 ತಿಳಿವುಗಳ ಹೋಲಿಕೆ  

ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.


ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ


ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.


ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ.


ಅಂತೆಯೆ, ಹತಾಕನು ಅರಮನೆಯ ಹೆಬ್ಬಾಗಿಲ ಮುಂದಿರುವ ನಗರದ ಬಯಲಿಗೆ, ಮೊರ್ದೆಕೈಯನ ಬಳಿಗೆ ಹೋದಾಗ,


ಹತಾಕನು ಎಸ್ತೇರಳ ಬಳಿಗೆ ಹಿಂದಿರುಗಿ ಆಕೆಗೆ ಮೊರ್ದೆಕೈ ಹೇಳಿದ ಎಲ್ಲಾ ಮಾತುಗಳನ್ನು ತಿಳಿಸಿದನು.


ಎಸ್ತೇರಳು ಮತ್ತೊಮ್ಮೆ, ಅವನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು