Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:8 - ಕನ್ನಡ ಸತ್ಯವೇದವು C.L. Bible (BSI)

8 ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಮ್ಮನ್ನು ಸಂಹರಿಸುವದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು - ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದ್ಯರನ್ನು ನಾಶಮಾಡಲು ಶೂಷನಿನಲ್ಲಿ ಪ್ರಕಟಗೊಂಡ ರಾಜಾಜ್ಞೆಯ ಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ, ಅವಳು ತನ್ನ ಜನರಿಗಾಗಿ ಅರಸನ ಮುಂದೆ ಹೋಗಿ ಬಿನ್ನಹ ಮಾಡುವಂತೆಯೂ ಆಕೆಗೆ ತಿಳಿಸಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:8
14 ತಿಳಿವುಗಳ ಹೋಲಿಕೆ  

ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು.


ಮೊರ್ದೆಕೈಯ ಆದೇಶದಂತೆ ಎಸ್ತೇರಳು ತನ್ನ ಬಂಧುಬಳಗದವರ ಬಗ್ಗೆಯಾಗಲಿ, ಸ್ವಜನರ ಬಗ್ಗೆಯಾಗಲಿ ಯಾರಿಗೂ ತಿಳಿಸಿರಲಿಲ್ಲ. (ಮೊರ್ದೆಕೈಯ) ಆರೈಕೆಯಲ್ಲಿದ್ದಾಗ ಆಕೆ ಯಾವ ರೀತಿ ನಡೆದುಕೊಂಡಿದ್ದಳೋ ಹಾಗೆಯೇ ಪ್ರಸ್ತುತಕಾಲದಲ್ಲೂ ಆತನ ಆಜ್ಞೆಯನ್ನು ಪಾಲಿಸುತ್ತಿದ್ದಳು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.


ಹತಾಕನು ಎಸ್ತೇರಳ ಬಳಿಗೆ ಹಿಂದಿರುಗಿ ಆಕೆಗೆ ಮೊರ್ದೆಕೈ ಹೇಳಿದ ಎಲ್ಲಾ ಮಾತುಗಳನ್ನು ತಿಳಿಸಿದನು.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು