Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:1 - ಕನ್ನಡ ಸತ್ಯವೇದವು C.L. Bible (BSI)

1 ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರ ಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜ ಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಲಿಗೆದುರಾಗಿ ಕೂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:1
14 ತಿಳಿವುಗಳ ಹೋಲಿಕೆ  

ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.


“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಆದ್ದರಿಂದ ಮೂರನೆಯ ದಿನದ ತನಕ ಅವನ ಸಮಾಧಿಗೆ ಭದ್ರವಾದ ಕಾವಲಿರಿಸಲು ಅಪ್ಪಣೆಯಾಗಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಅವನನ್ನು ಕದ್ದುಕೊಂಡುಹೋಗಿ, ಸತ್ತವನು ಬದುಕಿಬಂದಿದ್ದಾನೆ ಎಂದು ಜನರಿಗೆ ಹೇಳಬಹುದು; ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡುಮೋಸವಾದೀತು,” ಎಂದು ಕೇಳಿಕೊಂಡರು.


ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಪತ್ನಿಯ ರೂಪರಾಶಿಯನ್ನು ತನ್ನ ಪ್ರಜೆಗಳ ಹಾಗೂ ಪದಾಧಿಕಾರಿಗಳ ಮುಂದೆ ಪ್ರದರ್ಶಿಸುವ ಸಲುವಾಗಿ ರಾಜಮುಕುಟವನ್ನು ಧರಿಸಿದ ಆಕೆಯನ್ನು ರಾಜಸನ್ನಿಧಿಗೆ ಕರೆತರುವಂತೆ ಆಸ್ಥಾನ ಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳುಮಂದಿ ಕಂಚುಕಿಯರಿಗೆ ಅಪ್ಪಣೆಮಾಡಿದನು.


ಮೊರ್ದೆಕೈ ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು.


ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು