Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:11 - ಕನ್ನಡ ಸತ್ಯವೇದವು C.L. Bible (BSI)

11 ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಲ್ಲಿಯೂ ರಾಜ ಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿದ ಮೇಲೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:11
19 ತಿಳಿವುಗಳ ಹೋಲಿಕೆ  

ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಲಾಬಾನನ ಮಕ್ಕಳು, “ನಮ್ಮ ತಂದೆಯ ಆಸ್ತಿಪಾಸ್ತಿಯೆಲ್ಲ ಯಕೋಬನ ಪಾಲಾಯಿತು. ನಮ್ಮ ತಂದೆಯ ಆಸ್ತಿಯಿಂದಲೇ ಅವನು ಇಷ್ಟು ಐಶ್ವರ್ಯವನ್ನು ಶೇಖರಿಸಿದ್ದು,” ಎಂದು ಆಡಿಕೊಂಡರು.


ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II


ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು