ಎಸ್ತೇರಳು 6:10 - ಕನ್ನಡ ಸತ್ಯವೇದವು C.L. Bible (BSI)10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೂಡಲೆ ಅರಸನು ಹಾಮಾನನಿಗೆ - ನೀನು ಹೇಳಿದ ವಸ್ತ್ರಗಳನ್ನೂ ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಲಿನಲ್ಲಿ ಕೂತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಈಗಲೇ,” ಅರಸನು ಹಾಮಾನನಿಗೆ ಆಜ್ಞೆಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡುಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೆ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನಿನ್ನ ಸಲಹೆಯಂತೆಯೇ ಎಲ್ಲವನ್ನೂ ಮಾಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |