ಎಸ್ತೇರಳು 6:12 - ಕನ್ನಡ ಸತ್ಯವೇದವು C.L. Bible (BSI)12 ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು. ಅಧ್ಯಾಯವನ್ನು ನೋಡಿ |
ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.