Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:6 - ಕನ್ನಡ ಸತ್ಯವೇದವು C.L. Bible (BSI)

6 ಹಾಮಾನನು ಒಳಗೆ ಬಂದಾಗ ಅರಸನು ಅವನಿಗೆ, “ಅರಸನು ಒಬ್ಬ ವ್ಯಕ್ತಿಯನ್ನು ಗೌರವಿಸಲು ಬಯಸಿದರೆ ಅಂಥ ವ್ಯಕ್ತಿಗೆ ನೀಡಬಹುದಾದ ತಕ್ಕ ಸನ್ಮಾನ ಯಾವುದು?” ಎಂದು ವಿಚಾರಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹಾಮಾನನು ಬಂದಾಗ - ಅರಸನು ಯಾವನನ್ನು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿರುತ್ತಾನೋ ಅಂಥವನಿಗೆ ಮಾಡತಕ್ಕದ್ದೇನು ಎಂದು ಅವನನ್ನು ಕೇಳಿದನು. ಹಾಮಾನನು - ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವದಕ್ಕೆ ಇಷ್ಟವುಳ್ಳವನಾಗಿರುವನು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಾಮಾನನು ಒಳಗೆ ಪ್ರವೇಶಮಾಡುವಾಗ ಅರಸನು, “ಹಾಮಾನನೇ, ಅರಸನು ಒಬ್ಬನಿಗೆ ಗೌರವಿಸಬೇಕೆಂದು ಇಚ್ಫಿಸುವಾಗ ಯಾವ ರೀತಿಯಲ್ಲಿ ಅದನ್ನು ಮಾಡಬೇಕು?” ಎಂದು ಕೇಳಿದನು. ಆಗ ಹಾಮಾನನು, “ಅರಸನು ಗೌರವಿಸುವವನು ನನಗಿಂತ ಹೆಚ್ಚಿನವನು ಯಾರಿರಬಹುದು? ಅವನು ನನ್ನ ವಿಚಾರವಾಗಿಯೇ ನೆನಸುತ್ತಿರಬಹುದು” ಎಂದು ತನ್ನ ಮನಸ್ಸಿನಲ್ಲಿಯೇ ನೆನೆಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ, “ಅರಸನು ಒಬ್ಬ ವ್ಯಕ್ತಿಯನ್ನು ಸನ್ಮಾನಿಸಲು ಬಯಸಿದರೆ ಮನುಷ್ಯನಿಗೆ ಅಂಥ ವ್ಯಕ್ತಿಗೆ ಮಾಡಬೇಕಾದದ್ದೇನು?” ಎಂದು ವಿಚಾರಿಸಿದನು. ಆಗ ಹಾಮಾನನು ತನ್ನನ್ನು ಅಲ್ಲದೆ ಅರಸನು ಬೇರೆ ಯಾರನ್ನು ಸನ್ಮಾನಿಸಬೇಕೆಂದಿರುವನು ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:6
19 ತಿಳಿವುಗಳ ಹೋಲಿಕೆ  

ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.


ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನ ಸವಾರರಲ್ಲೊಬ್ಬನ ವಶಕ್ಕೆ ಕೊಡಬೇಕು; ಇವನು, ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿ, ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆಮಾಡಿಸುತ್ತಾ, ಅವನ ಮುಂದೆ ‘ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ’ ಎಂದು ಪ್ರಕಟಿಸಬೇಕು,” ಎಂದನು.


ಹಾಮಾನನು ತನ್ನನ್ನಲ್ಲದೆ ಬೇರೆ ಯಾರನ್ನು ಸನ್ಮಾನಿಸಲು ಅರಸನು ಬಯಸಿಯಾನು ಎಂದು ತನ್ನಲ್ಲೆ ಅಂದುಕೊಂಡು ಅವನಿಗೆ ಪ್ರತ್ಯುತ್ತರವಾಗಿ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ಈ ರೀತಿ ಮಾಡಬೇಕು:


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.


ಆದ್ದರಿಂದ ರಾಜಸೇವಕರು, “ಇಗೋ, ಹಾಮಾನರು ಅಂಗಳದಲ್ಲಿ ನಿಂತುಕೊಂಡಿದ್ದಾರೆ,” ಎಂದರು. ಅರಸನು, “ಅವನು ಒಳಗೆ ಬರಲಿ,” ಎಂದು ಅಪ್ಪಣೆಮಾಡಿದನು.


“ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.


ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರಬಂದು, ‘ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು,’ ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು