Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:10 - ಕನ್ನಡ ಸತ್ಯವೇದವು C.L. Bible (BSI)

10 ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:10
22 ತಿಳಿವುಗಳ ಹೋಲಿಕೆ  

ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿ ತೀರಿಸದೆ ಬಿಡುವುದಿಲ್ಲ,” ಎಂದು ಹೇಳಿ


ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು.


ಇದಾದ ಕೆಲವು ದಿನಗಳ ನಂತರ ಅರಸನ ಕೋಪವು ಶಾಂತವಾದಾಗ, ಅವನು ವಷ್ಟಿರಾಣಿಯನ್ನು, ಆಕೆಯ ವರ್ತನೆಯನ್ನು, ಆಕೆಯ ವಿರುದ್ಧ ತಾನು ನೀಡಿದ್ದ ತೀರ್ಪನ್ನು ಜ್ಞಾಪಿಸಿಕೊಂಡನು.


ಆದರೆ ಮುಖ್ಯ ಅಡಿಗೆಭಟ್ಟನನ್ನು ನೇಣು ಹಾಕಿಸಿದ. ಹೀಗೆ ಜೋಸೆಫನು ಹೇಳಿದ ಅರ್ಥ ಕಾರ್ಯಗತವಾಯಿತು.


ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.


ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.


ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ಒಳಿತಿಗಾಗಿ ಹಂಬಲಿಸುವವನು ಕೃಪಾರ್ಥಿ; ಕೇಡನ್ನು ಹುಡುಕುವವನಿಗೆ ಕೇಡೇ ಗತಿ.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?


ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.


ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


ಅವನನ್ನು ಅವನ ಕಾಲುಗಳೆ ಬಲೆಗೆ ಬೀಳಿಸುವುವು ಅವನನ್ನು ಪಾಳುಗುಂಡಿಯ ಮೇಲೆ ನಡೆಸುವುವು.


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II


ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು