Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:6 - ಕನ್ನಡ ಸತ್ಯವೇದವು C.L. Bible (BSI)

6 ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೆಯು - ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಈ ದುಷ್ಟ ಹಾಮಾನನೇ ಅಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಬೆಪ್ಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:6
18 ತಿಳಿವುಗಳ ಹೋಲಿಕೆ  

ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಇದನ್ನು ಕೇಳಿದ ಅರಸನು ತನ್ನ ಕೈಬೆರಳಿನಲ್ಲಿದ್ದ ಮುದ್ರೆ ಉಂಗುರವನ್ನು ತೆಗೆದು ಆಗಾಗನ ವಂಶಸ್ಥನೂ ಹೆಮ್ಮೆದಾತನ ಮಗನೂ ಯೆಹೂದ್ಯರ ಕಡುವೈರಿಯೂ ಆದ ಹಾಮಾನನಿಗೆ ಕೊಟ್ಟು,


ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಆಗ ಅರಸನು, “ಇಂಥ ದುಷ್ಕೃತ್ಯವನ್ನು ಎಸಗಲು ಸಂಚು ನಡೆಸಿದ ಕೇಡಿಗನು ಯಾರು? ಎಲ್ಲಿದ್ದಾನೆ ಅವನು?” ಎಂದು ಕೇಳಲು


ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು