Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:7 - ಕನ್ನಡ ಸತ್ಯವೇದವು C.L. Bible (BSI)

7 ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:7
14 ತಿಳಿವುಗಳ ಹೋಲಿಕೆ  

ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಯೋನಾತಾನನು ಅವನಿಗೆ, “ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ನಾನು ತಿಳಿಸದಿರುವೆನೇ?” ಎಂದನು.


ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.


ಆ ದಿನಗಳು ಕಳೆದ ನಂತರ ಅರಸನು ಶೂಷನ್ ನಗರದ ನಿವಾಸಿಗಳಿಗೆ ಶ್ರೀಮಂತ-ಬಡವ ಎಂಬ ಯಾವ ಭೇದಭಾವ ಮಾಡದೆ ಎಲ್ಲರಿಗೂ ಅರಮನೆಯ ತೋಟದ ಅಂಗಳದಲ್ಲಿ ಏಳು ದಿನಗಳ ಪರಿಯಂತರ ದೊಡ್ಡ ಔತಣವನ್ನೇರ್ಪಡಿಸಿದನು.


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು