9 ಇದಲ್ಲದೆ, ಅರಸನ ಸೀಮೆಯಲ್ಲಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಸಮಾಚಾರವನ್ನು ತಿಳಿಸಿದ ಮೊರ್ದಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಸಿದ್ಧಮಾಡಿಸಿದ ಇಪ್ಪತ್ತೆರಡು ಮೀಟರ್ ಎತ್ತರದ ನೇಣುಗಂಬವಿದೆಯಲ್ಲ,” ಎನ್ನಲು ಅರಸನು, “ಇವನನ್ನು ಅದಕ್ಕೆ ನೇತುಹಾಕಿರಿ,” ಎಂದು ಆಜ್ಞಾಪಿಸಿದನು.
9 ಇದಲ್ಲದೆ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು - ಇಗೋ ಈ ಹಾಮಾನನ ಮನೆಯ ಹತ್ತಿರ ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಇವನಿಂದ ಸಿದ್ಧಮಾಡಲ್ಪಟ್ಟ ಐವತ್ತು ಮೊಳ ಎತ್ತರವಾದ ಗಲ್ಲು ಮರವಿರುತ್ತದಲ್ಲಾ ಅನ್ನಲು ಅರಸನು - ಇವನನ್ನು ಅದಕ್ಕೆ ನೇತುಹಾಕಿರಿ ಎಂದು ಆಜ್ಞಾಪಿಸಿದನು.
9 ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.
9 ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು.
ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.
ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.
ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.
ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.
ಅರಸನನ್ನು ಕೊಲ್ಲಲು ದ್ವಾರಪಾಲಕರಾದ ಬಿಗೆತಾನ್, ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಪಿತೂರಿ ನಡೆಸಿದ್ದ ಪ್ರಕರಣ ಹಾಗೂ ಅದು ಮೊರ್ದೆಕೈಯ ಮುಖಾಂತರ ತಿಳಿದುಬಂದ ಲಿಖಿತ ವಿಷಯ ಅದರಲ್ಲಿ ಸಿಕ್ಕಿದವು.
ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?
ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.