Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:10 - ಕನ್ನಡ ಸತ್ಯವೇದವು C.L. Bible (BSI)

10 ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:10
13 ತಿಳಿವುಗಳ ಹೋಲಿಕೆ  

ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!


ಈ ಗದೆಯಿಂದ ಒಡೆದುಬಿಡುವೆನು ಕುದುರೆಯನ್ನೂ ಸವಾರನನ್ನೂ,


‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?


ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.


ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.


ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ಇದಲ್ಲದೆ, ಅವರು ರಥಾಶ್ವಗಳಿಗಾಗಿ ಹಾಗು ಸವಾರಿಕುದುರೆಗಳಿಗಾಗಿ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದು ಒಪ್ಪಿಸುತ್ತಿದ್ದರು.


ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.


ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು