ಎಸ್ತೇರಳು 8:12 - ಕನ್ನಡ ಸತ್ಯವೇದವು C.L. Bible (BSI)12 ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿ, ತಮ್ಮ ಪ್ರಾಣರಕ್ಷಣೆಗಾಗಿ ದಂಗೆಯೆದ್ದು, ತಮಗೆ ವಿರೋಧವಾಗಿ ಆಯುಧಗಳೊಡನೆ ನೆರೆದುಬರುವ ಎಲ್ಲಾ ಜನಾಂಗಗಳವರನ್ನೂ ಸಂಸ್ಥಾನಗಳವರನ್ನೂ ಮಕ್ಕಳು ಮಹಿಳೆಯರೆನ್ನದೆ ಎಲ್ಲರನ್ನೂ, ಕೊಂದು ಸಂಹರಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹದಿಮೂರನೆಯ ದಿನದಲ್ಲಿ ಕೂಡಿಕೊಂಡು ತಮ್ಮ ಪ್ರಾಣರಕ್ಷಣೆಗಾಗಿ ಎದ್ದು ತಮಗೆ ವಿರೋಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ ಸಂಸ್ಥಾನಗಳವರನ್ನೂ ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು ಸಂಹರಿಸಿ ನಿರ್ನಾಮಗೊಳಿಸಿ ಅವರ ಸೊತ್ತನ್ನು ಸೂರೆಮಾಡಬೇಕೆಂದೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೀಗೆ ಮಾಡಲು ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆ ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೆ ದಿನವನ್ನು ಗೊತ್ತುಪಡಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು. ಅಧ್ಯಾಯವನ್ನು ನೋಡಿ |