Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:15 - ಕನ್ನಡ ಸತ್ಯವೇದವು C.L. Bible (BSI)

15 ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:15
15 ತಿಳಿವುಗಳ ಹೋಲಿಕೆ  

ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.


ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.


ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.


ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.


ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.


ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.


ಅವನ ಶಕ್ತಿಸಾಮರ್ಥ್ಯದ ಸಾಹಸಕಾರ್ಯಗಳೆಲ್ಲವು ಹಾಗೂ ಅರಸನು ಮೊರ್ದೆಕೈಯನ್ನು ಅತ್ಯುನ್ನತ ಗೌರವಸ್ಥಾನಕ್ಕೆ ಏರಿಸಿದ್ದನ್ನು ಕುರಿತ ಪೂರ್ಣ ವಿವರವು ಮೇದ್ಯ ಮತ್ತು ಪರ್ಷಿಯ ದೇಶಗಳ ಅರಸರ ವೃತ್ತಾಂತಗ್ರಂಥದಲ್ಲಿ ಬರೆಯಲಾಗಿವೆ.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು