ಎಸ್ತೇರಳು 8:3 - ಕನ್ನಡ ಸತ್ಯವೇದವು C.L. Bible (BSI)3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎಸ್ತೇರಳು ತಿರಿಗಿ ಅರಸನನ್ನು ಮಾತಾಡಿಸುವದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು ಅತ್ತು - ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ಅಪಾಯಗಳನ್ನು ನಿವಾರಿಸಬೇಕೆಂದು ವಿಜ್ಞಾಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎಸ್ತೇರಳು ತಿರುಗಿ ರಾಜನನ್ನು ಮಾತಾಡಿಸುವುದಕ್ಕೆ ಹೋದಳು. ಎಸ್ತೇರಳು ಅರಸನ ಪಾದಗಳಿಗೆ ಅಡ್ಡಬಿದ್ದು ಅಳಲು ಪ್ರಾರಂಭಿಸಿದಳು. ಅವಳು ಹಾಮಾನನ ದುಷ್ಟ ಯೋಜನೆಯನ್ನು ರದ್ದುಮಾಡಬೇಕೆಂದು ಅರಸನನ್ನು ಬೇಡಿಕೊಂಡಳು. ಅಗಾಗನ ವಂಶಿಕನಾದ ಹಾಮಾನನು ಯೆಹೂದ್ಯರನ್ನು ನಿರ್ಮೂಲ ಮಾಡುವ ಹಂಚಿಕೆಯನ್ನು ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು. ಅಧ್ಯಾಯವನ್ನು ನೋಡಿ |