Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:8 - ಕನ್ನಡ ಸತ್ಯವೇದವು C.L. Bible (BSI)

8 ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಕೂಡದಷ್ಟೆ. ಹೀಗಿರುವದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವದನ್ನು ಅರಸನ ಹೆಸರಿನಲ್ಲಿ ನೀವು ಬರೆಯಿಸಿ ರಾಜ ಮುದ್ರೆಯನ್ನು ಹಾಕಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈಗ ಇನ್ನೊಂದು ರಾಜಾಜ್ಞೆಯನ್ನು ಬರೆಯಿಸಲು ನಾನು ನಿಮಗೆ ಅಧಿಕಾರ ಕೊಡುತ್ತೇನೆ. ನಿಮಗೆ ಸರಿತೋಚುವ ರೀತಿಯಲ್ಲಿ ಯೆಹೂದ್ಯರಿಗೆ ಸಹಾಯವಾಗುವಂತೆ ಆ ಆಜ್ಞೆಯನ್ನು ರಾಜನ ಅಧಿಕಾರದೊಡನೆ ಬರೆಯಿಸಿ, ರಾಜನ ಉಂಗುರದಿಂದ ಮುದ್ರೆ ಒತ್ತಿರಿ. ರಾಜ ಮುದ್ರೆಯುಳ್ಳ ಯಾವ ಆಜ್ಞೆಯೂ ರದ್ದಾಗಕೂಡದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:8
9 ತಿಳಿವುಗಳ ಹೋಲಿಕೆ  

ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.


ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.


ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.


“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು