Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:9
10 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕುಟುಂಬದಲ್ಲೂ ಪುರುಷನೇ ಅಧಿಕಾರ ವಹಿಸಬೇಕು, ಅವನು ಸ್ವಜನರ ಭಾಷೆಯಲ್ಲೇ ವ್ಯವಹಾರ ನಡೆಸಬೇಕು ಎಂದು ತನ್ನ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮುಖೇನ ಪ್ರಕಟಿಸಿದನು. ಇವು ಆಯಾ ಪ್ರಾಂತ್ಯಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲೂ ಬರೆಯಲಾದವು.


ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.


ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು.


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಜೆರುಸಲೇಮಿನಲ್ಲಿ ಕೂಡಿಬಂದರು.


ಅರಸ ಅಹಷ್ವೇರೋಷನು ತನ್ನ ರಾಜ್ಯಕ್ಕೆ ಸೇರಿದ ಎಲ್ಲಾ ದೇಶಗಳ ಮೇಲೂ ಸಮುದ್ರ-ದ್ವೀಪಗಳ ಮೇಲೂ ತೆರಿಗೆಯನ್ನು ವಿಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು