Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:22 - ಕನ್ನಡ ಸತ್ಯವೇದವು C.L. Bible (BSI)

22 ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:22
24 ತಿಳಿವುಗಳ ಹೋಲಿಕೆ  

ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು :


ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


‘ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆ ಮತ್ತು ಹದಿನೈದನೆಯ ದಿನಗಳನ್ನು ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮ ಎಂದು ಭಾವಿಸಬೇಕು.


ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾಗಿದ್ದ ಪ್ರಕಾರವೇ ಯೆಹೂದ್ಯರು ಅನುಸರಿಸಿದರು. ಅಂದಿನ ವರ್ಷ ಆಚರಿಸಿದ ಹಬ್ಬವು ತಮ್ಮಲ್ಲಿ ವಾರ್ಷಿಕ ಉತ್ಸವವಾಗಿ ಊರ್ಜಿತಗೊಳ್ಳಬೇಕೆಂದು ತೀರ್ಮಾನಿಸಿಕೊಂಡರು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು