ಎಸ್ತೇರಳು 9:23 - ಕನ್ನಡ ಸತ್ಯವೇದವು C.L. Bible (BSI)23 ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾಗಿದ್ದ ಪ್ರಕಾರವೇ ಯೆಹೂದ್ಯರು ಅನುಸರಿಸಿದರು. ಅಂದಿನ ವರ್ಷ ಆಚರಿಸಿದ ಹಬ್ಬವು ತಮ್ಮಲ್ಲಿ ವಾರ್ಷಿಕ ಉತ್ಸವವಾಗಿ ಊರ್ಜಿತಗೊಳ್ಳಬೇಕೆಂದು ತೀರ್ಮಾನಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಸ್ವೀಕರಿಸಿ ಆ ವರುಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿ |