Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:3 - ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಗಿತ್ತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದಹಾಗೆಲ್ಲಾ ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕೆಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:3
9 ತಿಳಿವುಗಳ ಹೋಲಿಕೆ  

ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.


ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು.


ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು