Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:30 - ಕನ್ನಡ ಸತ್ಯವೇದವು C.L. Bible (BSI)

30 ಮೊರ್ದೆಕೈ, ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೂ ಆ ಪತ್ರಗಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರ ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:30
7 ತಿಳಿವುಗಳ ಹೋಲಿಕೆ  

ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರ ಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.


ಸಾರಳು ನೂರಿಪ್ಪತ್ತೇಳು ವರುಷ ಬದುಕಿದ್ದಳು.


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು