Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:5 - ಕನ್ನಡ ಸತ್ಯವೇದವು C.L. Bible (BSI)

5 ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ಹಗೆಗಳನ್ನು ಇಷ್ಟವಿದ್ದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:5
11 ತಿಳಿವುಗಳ ಹೋಲಿಕೆ  

ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.


ಶೂಷನ್ ನಗರದಲ್ಲೇ ಐನೂರು ಮಂದಿ ಹತರಾದರು.


ಅಂತೆಯೇ ಸೇರಿ ಸ್ವಾಧೀನಮಾಡಿಕೊಂಡರು ಆ ನಾಡನು ಅವರಿಗಧೀನಪಡಿಸಿದಿರಿ ಅದರ ರಾಜರನು, ಪ್ರಜೆಗಳನು, ನಿವಾಸಿಗಳನು, ಆ ಕಾನಾನ್ಯರನು, ತಮಗಿಷ್ಟಾನುಸಾರ ನಡೆಸಲು.


ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು