Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:1 - ಕನ್ನಡ ಸತ್ಯವೇದವು C.L. Bible (BSI)

1 ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋವಿುನ ವಿಷಯವಾಗಿ ನುಡಿದ ವಾಕ್ಯ. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ; ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿಕಳುಹಿಸಿದ್ದಾನೆ - ಹೊರಡಿರಿ, ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:1
28 ತಿಳಿವುಗಳ ಹೋಲಿಕೆ  

“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಫರೋಹನ ಸಾಮಂತರಾಜರು ಚೊವನಿನಲ್ಲಿದ್ದಾರೆ. ಅವನ ರಾಯಭಾರಿಗಳು ಹಾನೇಸನ್ನು ತಲುಪಿದ್ದಾರೆ.


‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಇದಲ್ಲದೆ, ರಣಕಹಳೆಗಳನ್ನೂ ಸಮರಸುದ್ದಿಗಳನ್ನೂ ಕೇಳುವಿರಿ. ಆಗ ನೀವು ಕಳವಳಪಡಬೇಡಿ. ಇವೆಲ್ಲವೂ ಸಂಭವಿಸಲೇಬೇಕು. ಆದರೂ ಇದಿನ್ನೂ ಅಂತ್ಯಕಾಲವಲ್ಲ;


ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.


ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;


ನಾನು ಸರ್ವೇಶ್ವರನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡೆ. ಸರ್ವೇಶ್ವರ ಯಾವ ರಾಷ್ಟ್ರಗಳ ಬಳಿಗೆ ನನ್ನನ್ನು ಕಳಿಸಿದರೋ, ಆ ಎಲ್ಲ ರಾಷ್ಟ್ರಗಳು ಅದರಿಂದ ಕುಡಿಯುವಂತೆ ಮಾಡಿದೆ.


ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.


‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು.


ಸೇಯೀರ್ ಮಲೆನಾಡಿನಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಾವಳಿ ಹೀಗಿದೆ:


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು