Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:10 - ಕನ್ನಡ ಸತ್ಯವೇದವು C.L. Bible (BSI)

10 “ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿವಿುತ್ತ ಅವಮಾನವು ನಿನ್ನನ್ನು ಕವಿಯುವದು; ನಿತ್ಯನಾಶನಕ್ಕೆ ಈಡಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಹಿಂಸಾಕೃತ್ಯಗಳ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚುವುದು. ನೀನು ಎಂದೆಂದಿಗೂ ನಾಶವಾಗಿ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:10
30 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.


ಮುಪ್ಪಾಗಿಸಿರುವೆ ಅವನನು ಕಾಲಕ್ಕೆ ಮುಂಚೆ I ನಿನ್ನ ನಿಮಿತ್ತ ಅವನನು ಆವರಿಸಿದೆ ಲಜ್ಜೆ II


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ತೊಡಿಸುವೆನು ಅವನ ವೈರಿಗಳಿಗೆ ಲಜ್ಜಾಕವಚವನು I ಮುಡಿಸುವೆನು ಅವನಿಗಾದರೋ ಪ್ರಜ್ವಲ ಕಿರೀಟವನು” II


ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II


ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ I ನಾಚಿಕೆಯಿಂದಲೆ ಮುಖ ಮುಚ್ಚಿಕೊಂಡೆನಯ್ಯಾ II


ಅದಕ್ಕೆ ಯಕೋಬನು, “ನನ್ನ ಅಣ್ಣನ ಮೈ ತುಂಬ ರೋಮಗಳಿವೆ. ನನ್ನ ಮೈ ಆದರೋ ನುಣ್ಣಗಿದೆ;


“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?


ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ಮರಳಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಗೊಯ್ದಿದ್ದರು.


ಸಜ್ಜನರ ತಲೆಯ ಮೇಲೆ ಆಶೀರ್ವಾದ; ದುರ್ಜನರ ಬಾಯಿ ಹಿಂಸಾಚಾರದ ಮುಚ್ಚಳ.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.


ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು