Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:11 - ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಸುಮ್ಮನೆ ಎದುರುನಿಂತ ದಿನದಲ್ಲಿ, ಅಂದರೆ ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ಮ್ಲೇಚ್ಫರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇವಿುನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನೂ ಅವರಂತೆ ಇದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನು ಪ್ರತ್ಯೇಕವಾಗಿ ಎದುರು ನಿಂತ ದಿವಸದಲ್ಲಿ ಪರರು ಅವನ ಸೊತ್ತನ್ನು ತೆಗೆದುಕೊಂಡು ಹೋದ ದಿವಸದಲ್ಲಿ ಪರಕೀಯರು ಅವನ ಬಾಗಿಲುಗಳಲ್ಲಿ ಪ್ರವೇಶಿಸಿ, ಯೆರೂಸಲೇಮಿನ ಸೊತ್ತಿಗಾಗಿ ಚೀಟು ಹಾಕಿದಾಗ ನೀನೂ ಅವರಲ್ಲಿ ಒಬ್ಬನ ಹಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:11
13 ತಿಳಿವುಗಳ ಹೋಲಿಕೆ  

ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.


ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.


ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II


ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.


ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II


ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II


“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು