ಓಬದ್ಯ 1:12 - ಕನ್ನಡ ಸತ್ಯವೇದವು C.L. Bible (BSI)12 ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ಸಹೋದರನ ವಿಪತ್ತಿನ ದಿನದಲ್ಲಿ ನೀನು ಅವನನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಯೆಹೂದದ ಜನರು ನಾಶವಾದಾಗ ನೀನು ಸಂತೋಷಪಡಬಾರದಿತ್ತು. ಅವರ ಕಷ್ಟದ ದಿವಸದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ