ಓಬದ್ಯ 1:14 - ಕನ್ನಡ ಸತ್ಯವೇದವು C.L. Bible (BSI)14 ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಅವರನ್ನು ಕೊಲ್ಲುವುದಕ್ಕಾಗಿ ಕೂಡುದಾರಿಗಳಲ್ಲಿ ನಿಲ್ಲಬಾರದಿತ್ತು. ತುರ್ತುಪರಿಸ್ಥಿತಿಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿನ ಕೈಗೆ ಒಪ್ಪಿಸಬಾರದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಓಡಿಹೋಗುವವರನ್ನು ಕೊಲ್ಲುವದಕ್ಕೆ ದಾರಿಗಳು ಕೂಡುವ ಸ್ಥಳದಲ್ಲಿ ನಿಲ್ಲಬಾರದಾಗಿತ್ತು; ಇಕ್ಕಟ್ಟಿನ ವೇಳೆಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿಗೆ ಒಪ್ಪಿಸಬಾರದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾರಿಯ ಚೌಕದಲ್ಲಿ ನೀನು ನಿಂತುಕೊಂಡು ತಪ್ಪಿಸಿಕೊಂಡು ಹೋಗುವವರನ್ನು ಸಾಯಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ತಪ್ಪಿಸಿಕೊಂಡು ಹೋದವರನ್ನು ನೀನು ಸೆರೆಹಿಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರಲ್ಲಿ ಓಡಿಹೋದವರನ್ನು ಕಡಿದುಬಿಡುವುದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು. ಕಷ್ಟದ ದಿವಸದಲ್ಲಿ ಅವರಲ್ಲಿ ಉಳಿದುಕೊಂಡವರನ್ನು ಹಿಡಿದುಕೊಡಬಾರದಾಗಿತ್ತು. ಅಧ್ಯಾಯವನ್ನು ನೋಡಿ |