Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:17 - ಕನ್ನಡ ಸತ್ಯವೇದವು C.L. Bible (BSI)

17 “ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:17
25 ತಿಳಿವುಗಳ ಹೋಲಿಕೆ  

ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.”


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು