Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:18 - ಕನ್ನಡ ಸತ್ಯವೇದವು C.L. Bible (BSI)

18 ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:18
23 ತಿಳಿವುಗಳ ಹೋಲಿಕೆ  

“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.


ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಆಗ ನೀನು ಅವರಿಗೆ, “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ಇಗೋ, ಎಫ್ರಯಿಮು ಹಿಡಿದಿರುವ ದಂಡವನ್ನು ಅಂದರೆ, ಜೋಸೆಫನ ಮತ್ತು ಜೋಸೆಫನಿಗೆ ಸೇರಿದ ಇಸ್ರಯೇಲ್ ಕುಲಗಳ ದಂಡವನ್ನು ನಾನು ತೆಗೆದು ಜುದೇಯದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು’ ಎಂಬುದನ್ನು ಹೇಳು.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.


“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;


ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ದಂಡನೆಯ ಕಾಲವನ್ನು ಗೊತ್ತುಮಾಡಿರುವೆನು. ಅದು ಬಂದಾಗ ಅವರಲ್ಲಿ ಯಾರೂ ಉಳಿಯರು. ಇದು ನನ್ನ ತೀರ್ಮಾನ,” ಎಂದರು.


ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆ ಜನರು ಈಜಿಪ್ಟ್ ದೇಶದಲ್ಲೆಲ್ಲಾ ಸುತ್ತಿ, ಹುಲ್ಲು ಸಿಕ್ಕದೆ ಕೂಳೆಕಿತ್ತು ಕೂಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು