ಓಬದ್ಯ 1:21 - ಕನ್ನಡ ಸತ್ಯವೇದವು C.L. Bible (BSI)21 ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.