Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:4 - ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡುಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:4
8 ತಿಳಿವುಗಳ ಹೋಲಿಕೆ  

ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”


(ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು