Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:7 - ಕನ್ನಡ ಸತ್ಯವೇದವು C.L. Bible (BSI)

7 ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ವಿುತ್ರಮಂಡಲಿಯವರೆಲ್ಲರು ನಿನ್ನನ್ನು ನಿನ್ನ ಎಲ್ಲೆಯ ಆಚೆಗೆ ನೂಕಿಬಿಟ್ಟಿದ್ದಾರೆ; ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ, ನಿನ್ನ ಅನ್ನ [ತಿಂದವರು] ಅವಿವೇಕಿಯಾದ ನಿನಗೆ ಉರುಲೊಡ್ಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಸ್ನೇಹಿತರಂತಿದ್ದ ಜನರೆಲ್ಲರೂ ಸೇರಿ ನಿನ್ನನ್ನು ನಿನ್ನ ದೇಶದಿಂದ ಹೊರಗಟ್ಟುವರು. ನಿನ್ನೊಡನೆ ಸಮಾಧಾನದಲ್ಲಿದ್ದ ಜನರು ನಿನ್ನನ್ನು ಮೋಸಪಡಿಸಿ ಸೋಲಿಸುವರು. ನಿನ್ನೊಂದಿಗೆ ಯುದ್ಧದಲ್ಲಿ ಹೋರಾಡಿದವನು ನಿನ್ನನ್ನು ಉರುಲಿನಲ್ಲಿ ಸಿಕ್ಕಿಸುವನು. ‘ಆದರೆ ಅದು ಅವನಿಗೆ ತಿಳಿಯುವುದೇ ಇಲ್ಲ’” ಎಂದು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:7
16 ತಿಳಿವುಗಳ ಹೋಲಿಕೆ  

ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ನೀನಾದರೋ ಪ್ರಭು ಕರುಣಿಸು, ಏಳ ಮಾಡೆನ್ನನು I ನಾನವರಿಗಾಗಿ ಮುಯ್ಯಿಗೆ ಮುಯ್ಯಿ ತೀರಿಸುವೆನು II


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು