Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:8 - ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಲ್ಲಿ ಎದೋಮಿನ ಜ್ಞಾನಿಗಳನ್ನೂ ಏಸಾವಿನ ಪರ್ವತದ ಬುದ್ಧಿಜೀವಿಗಳನ್ನೂ ನಾನು ಅಳಿಸದೆ ಬಿಡುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎದೋವಿುನೊಳಗಿಂದ ಜ್ಞಾನಿಗಳನ್ನು ಅಳಿಸದೆ ಬಿಟ್ಟೇನೋ? ಏಸಾವಿನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೆ ಇದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೇಳುವುದೇನೆಂದರೆ, “ಆ ದಿವಸದಲ್ಲಿ ಎದೋಮಿನಲ್ಲಿರುವ ಬುದ್ಧಿವಂತರನ್ನು ನಾಶಮಾಡುವೆನು. ಏಸಾವಿನ ಪರ್ವತದಲ್ಲಿರುವ ಜಾಣರನ್ನು ನಾನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಆ ದಿವಸದಲ್ಲಿ,’ ಎದೋಮಿನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:8
8 ತಿಳಿವುಗಳ ಹೋಲಿಕೆ  

ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ಈಜಿಪ್ಟಿನ ಅರಸನೇ, ನಿನ್ನ ವಿದ್ವಾಂಸರೆಲ್ಲಿ? ಅವರೇ ನಿನಗೆ ತಿಳುವಳಿಕೆ ಕೊಡಲಿ. ಈಜಿಪ್ಟಿನ ವಿರೋಧವಾಗಿ ಸೇನಾಧೀಶ್ವರ ಸರ್ವೇಶ್ವರ ಯೋಚಿಸಿರುವುದನ್ನು ಅವರೇ ನಿನಗೆ ತಿಳಿಯಪಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು