Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:9 - ಕನ್ನಡ ಸತ್ಯವೇದವು C.L. Bible (BSI)

9 ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತೇಮಾನೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವಿನ ಪರ್ವತದೊಳಗಿಂದ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು. ಏಸಾವಿನ ಪರ್ವತದಲ್ಲಿರುವ ಪ್ರತಿಯೊಬ್ಬನು ನಾಶವಾಗುವನು. ಎಷ್ಟೋ ಮಂದಿ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶವಾಗುವ ಹಾಗೆ ತೇಮಾನೇ, ನಿನ್ನ ಪರಾಕ್ರಮಶಾಲಿಗಳು ಗಾಬರಿಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:9
19 ತಿಳಿವುಗಳ ಹೋಲಿಕೆ  

ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಎಲೀಫಜನಿಗೆ ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್, ಎಂಬ ಐದು ಮಕ್ಕಳು.


ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ಪ್ರಬಲವಾಗಿದ್ದವರಲ್ಲಿ ಧೀರನಾದವನು ಸಹ ನಗ್ನನಾಗಿ ಪಲಾಯನ ಮಾಡುವನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಯೋಬಾಬ ಮೃತನಾದ ಮೇಲೆ ತೇಮಾನೀಯರ ನಾಡಿನ ಹುಷಾಮ ಅರಸನಾದ.


ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.


ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು