Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:3 - ಕನ್ನಡ ಸತ್ಯವೇದವು C.L. Bible (BSI)

3 ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:3
32 ತಿಳಿವುಗಳ ಹೋಲಿಕೆ  

ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ.


ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ, ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.”


ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು.


ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ವೃದ್ಧಿಯಾಗುವರವರು ನೀರನಾಲೆ ಬದಿಯ ಪಚ್ಚೆಪಸಿರಂತೆ, ಹರಿವ ಕಾಲುವೆಗಳ ಬಳಿಯ ಜೊಂಡುಹುಲ್ಲಿನಂತೆ.


ಮಳೆ ವಾಸನೆಯಿಂದಲೆ ಅದು ಮೊಳೆಯುವುದು ಗಿಡದ ಹಾಗೆ ಅದು ಕವಲೊಡೆದುಕೊಳ್ಳುವುದು.


ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.


“ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ!


‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II


ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.


ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರುಮರಗಳಂತೆ, ನೀರ ಬದಿಯ ದೇವದಾರು ವೃಕ್ಷಗಳಂತೆ.


“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.


ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.


ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು