Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:5 - ಕನ್ನಡ ಸತ್ಯವೇದವು C.L. Bible (BSI)

5 ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲೂ ಪಾಪಾತ್ಮರು ನೀತಿವಂತರ ಸಭೆಯಲ್ಲೂ ನಿಲ್ಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು, ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:5
12 ತಿಳಿವುಗಳ ಹೋಲಿಕೆ  

ನಿಲ್ಲಲಾರರು ನಿನ್ನ ಮುಂದೆ ಗರ್ವಿಗಳು I ನಿನಗೆ ವೈರಿಗಳಾಗುವರು ಅಧರ್ಮಿಗಳು II


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.


ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು